ಹುಬ್ಬಳ್ಳಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿದ ಕರೆಯ ಮೇರೆಗೆ, ಹುಬ್ಬಳ್ಳಿಯಲ್ಲೂ ಇಂದು ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತಗೊಳಿಸಿ, ನಗರದ ಚನ್ನಮ್ಮ ಸರ್ಕಲ್ ಬಳಿ ಕಿರಿಯ ವೈದ್ಯರು ಟೀ ಮಾರಾಟ ಮಾಡುವ ಮೂಲಕ, ವಿನೂತನವಾಗಿ ಪ್ರತಿಭಟನೆ ಮಾಡಿದರು.
ಕಿಮ್ಸ್ ಆಸ್ಪತ್ರೆ ಹೊರತು ಪಡಿಸಿ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಪ್ರಕರಣಗಳನ್ನು ಹೊರತುಪಡಿಸಿ, ಇನ್ನುಳಿದ ಯಾವುದೇ ವೈದ್ಯಕೀಯ ಸೇವೆಗಳು ಲಭ್ಯ ನೀಡುತ್ತಿಲ್ಲಾ. ಇದರಿಂದಾಗಿ ರೋಗಿಗಳು ಪರದಾಟ ನಡೆಸುವ ಸ್ಥಿತಿ ಉಂಟಾಗಿದೆ.
ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದ್ದು, ವೈದ್ಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಸರ್ಕಾರ ಇದರ ಬಗ್ಗೆ ತಕ್ಷಣ ಕ್ರಮಕೈಗೊಂಡು, ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಐಎಂಎ ಒತ್ತಾಯಿಸಿದೆ. ಸರ್ಕಾರದ ಮೇಲೆ ಒತ್ತಡ ತರಲು ಒಂದು ದಿನದ ಒಪಿಡಿ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಿದರು. ಆದ್ರೆ ಕಿಮ್ಸ್ ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಒಪಿಡಿ ಬಂದ್ ಇರೊದಿಲ್ಲವೆಂದು ಕಿಮ್ಸ್ ನಿರ್ದೇಶಕ ತಿಳಿಸಿದ್ದಾರೆ.