ಧಾರವಾಡ: ಸ್ವಾತಂತ್ರ್ಯ ಹೋರಾಟದಲ್ಲಿ ಉತ್ತರ ಕರ್ನಾಟಕ ಹಾಗೂ ಪ್ರಮುಖವಾಗಿ ಧಾರವಾಡದ ಪಾತ್ರ ಏನು ಎಂಬುದರ ಕುರಿತ ಛಾಯಾಚಿತ್ರ ಪ್ರದರ್ಶನವೊಂದನ್ನು ಧಾರವಾಡದ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಛಾಯಾಚಿತ್ರ ಪ್ರದರ್ಶನಕ್ಕೆ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಚಾಲನೆ ನೀಡಿ, ಸ್ವತಃ ಅವರೂ ಕೂಡ ಛಾಯಾಚಿತ್ರಗಳನ್ನು ಕುತೂಹಲದಿಂದ ವೀಕ್ಷಿಸಿ ವಿವಿಧ ಮಾಹಿತಿ ಪಡೆದುಕೊಂಡರು.
ಅಲ್ಲದೇ ಛಾಯಾಚಿತ್ರ ವೀಕ್ಷಣೆಗೆ ಬಂದಿದ್ದ ಶಾಲಾ ಮಕ್ಕಳಿಗೆ ಸ್ವಾತಂತ್ರ್ಯ ಸಂಗ್ರಾಮ ಹೇಗಿತ್ತು? ಆಗಿನ ಸಂದರ್ಭದಲ್ಲಿ ಯಾವ ರೀತಿ ಹೋರಾಟ ಮಾಡಿದರು? ಸ್ವಾತಂತ್ರ್ಯ ಹೋರಾಟಗಾರರನ್ನು ನಾವು ಯಾವ ರೀತಿ ಮಾದರಿಯಾಗಿ ತೆಗೆದುಕೊಳ್ಳಬೇಕು ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
Ad