ಧಾರವಾಡ : ಪಶ್ಚಿಮ ಬಂಗಾಳದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಬೇಕು ಹಾಗೂ ಅಸಭ್ಯ ವರ್ತನೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಸ್ಕೃತಿ ಟ್ರಸ್ಟ್ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಮತ್ತು ಉತ್ತರ ದಿನಾಜ್‌ಪುರದಲ್ಲಿ ನಡೆದ ಘಟನೆಯಾಗಿದೆ. ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.