ನವಲಗುಂದ: 7ನೇ ವೇತನ ಆಯೋಗದ ವರದಿ ಜಾರಿ, ಎನ್‌ಪಿಎಸ್‌ ರದ್ದು, ಹಳೇ ಪಿಂಚಣಿ ಯೋಜನೆ ಜಾರಿ ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಬಿ. ಕೊಪ್ಪದ ನೇತೃತ್ವದಲ್ಲಿ ನೌಕರರ ನಿಯೋಗ ಶಾಸಕ ಎನ್.ಎಚ್‌. ಕೊನರಡ್ಡಿಗೆ ಮನವಿ ಸಲ್ಲಿಸಿದರು.

ಈ ವೇಳೆ ಶಾಸಕರು ಮಾತನಾಡಿ, ಸರ್ಕಾರದ ಹಂತದಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು ಮುಖ್ಯಮಂತ್ರಿ ಯವರು ಸಕಾರಾತ್ಮಕವಾಗಿ ಸ್ಪಂದಿಸುವರು ಎಂಬ ನಂಬಿಕೆಯಿದೆ. ತಮ್ಮ ಬೇಡಿಕೆಯ ಬಗ್ಗೆ ನಾನೂ ಕೂಡಾ ಸಿದ್ದರಾಮಯ್ಯನವರಿಗೆ ಮನವಿ ಮಾಡುವೆ ಎಂದು ಭರವಸೆ ನೀಡಿದರು. ಇದಕ್ಕೂ ಮೊದಲು ತಹಶೀಲ್ದಾರ ಸುಧೀರ ಸಾಹುಕಾರ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.