Ad

ನೀಟ್‌, ನೆಟ್ ಭ್ರಷ್ಟಾಚಾರ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

Hubbali

ಧಾರವಾಡ: ನೀಟ್‌ ಹಾಗೂ ನೆಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಕೇಂದ್ರ ಶಿಕ್ಷಣ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Ad
300x250 2

ಜೂನ್ 4 ರಂದು ಘೋಷಿಸಲಾಗಿದ್ದ ನೀಟ್ ಪರೀಕ್ಷೆ ಫಲಿತಾಂಶಗಳು ಸರಿಯಾದ ಪಾರದರ್ಶಕತೆ ಇಲ್ಲದೇ ಪೇಪರ್ ಸೋರಿಕೆಯಂತಹ ದೂರುಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕಿದ್ದಾರೆ. ಲಕ್ಷಗಟ್ಟಲೇ ವಿದ್ಯಾರ್ಥಿಗಳು ಹಾಜರಾಗಿದ್ದ ಯುಜಿಸಿ ನೆಟ್ ಪರೀಕ್ಷೆಯು ಪೇಪ‌ರ್ ಸೋರಿಕೆಯ ವರದಿಗಳಿಂದ ಅದನ್ನು ರದ್ದುಗೊಳಿಸಲಾಯಿತು.

ಕೇಂದ್ರೀಕೃತ ಪರೀಕ್ಷೆಗಳ ಪಾಲಸಿಗಳಿಂದ ಶಿಕ್ಷಣದ ಖಾಸಗೀಕರಣ ಹೆಚ್ಚುತ್ತಿದೆ. ಇದರಿಂದ ಕೋಟ್ಯಂತರ ತಳ ಸಮುದಾಯದ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ದುಬಾರಿಯಾಗಿದೆ. ಆದ್ದರಿಂದ ಈಗಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಹಾಗೂ ನೀಟ್ ಮತ್ತು ನೆಟ್ ಪರೀಕ್ಷೆಗಳ ಸ್ವಾಯತ್ತತೆಯನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

Ad
Ad
Nk Channel Final 21 09 2023
Ad