ಧಾರವಾಡ : ನಗರದಲ್ಲಿ ಡೆಂಗ್ಯೂ ಹಾಗೂ ಚಿಕನಗೂನ್ಯ ಹಾವಳಿ ಹೆಚ್ಚಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಂದು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಡೆಂಗ್ಯೂ ವಾರ್ಡ್ ನಲ್ಲಿ ದಾಖಲಾಗಿದ್ದ ರೋಗಿಗಳ ಆರೋಗ್ಯ, ಸೂಕ್ತ ಚಿಕಿತ್ಸೆ ಕುರಿತು ವಿಚಾರಿಸಿದರು.
ಅದೇ ರೀತಿ ಜಿಲ್ಲಾ ಆಸ್ಪತ್ರೆಯ ಎಲುಬು-ಕಿಲು ವಾರ್ಡ್, ಮಕ್ಕಳ ವಾರ್ಡ್ ಮತ್ತು ಫಾರ್ಮಸಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಚಿಕಿತ್ಸೆ ಪಡೆಯುತ್ತಿರುವ ವಿವಿಧ ರೋಗಿಗಳ ಆರೋಗ್ಯವನ್ನು ಸಚಿವರು ವಿಚಾರಿಸಿದರು. ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಸಿಬ್ಬಂದಿ ವರ್ಗ ಇತರರು ಭಾಗಿಯಾಗಿದ್ದರು.

