Bengaluru 25°C
Ad

ಅನೈತಿಕ ಸಂಬಂಧದ ಶಂಕೆ: ಬಾಡಿಗೆ ಮನೆಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣು

ಬಾಡಿಗೆ ಮನೆಯಲ್ಲಿ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ.

ಹುಬ್ಬಳ್ಳಿ: ಬಾಡಿಗೆ ಮನೆಯಲ್ಲಿ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ.

ಮನೆಯಿಂದ ದುರ್ವಾಸನೆ ಬರತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಪರಿಶೀಲನೆ ನಡೆಸಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಧಾರವಾಡದ ಟ್ರಾಫಿಕ್‌ ಕಾನ್‌ಸ್ಟೇಬಲ್ ಮಹೇಶ್ ಹೆಸರೂರ (31), ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು. ಬಾಡಿಗೆ ಮನೆಯಲ್ಲಿ ಜೋಡಿ ಆತ್ಮಹತ್ಯೆಗೆ ಶರಣಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಅನೈತಿಕ ಸಂಬಂಧದ ಕಾರಣ ಜೋಡಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad