Bengaluru 22°C
Ad

ಡೆಂಗ್ಯೂ ಪ್ರಕರಣ: ಜನರಿಗೆ ಜಾಗೃತಿ ಮೂಡಿಸುವಂತೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು. ‌

ಧಾರವಾಡ : ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು. ‌

ಮುಂದಿನ 15 ದಿನಗಳಲ್ಲಿ ಡೆಂಗ್ಯೂ ಶಂಕಿತ ಪ್ರಕರಣಗಳು ಕಡಿಮೆ ಆಗಿ, ಜ್ವರಪೀಡಿತರ ಸಂಖ್ಯೆ ಇಳಿಮುಖವಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪಬ್ಲಿಕ್ ನೆಗ್ಲಿಜೆನಸಿ ಆ್ಯಕ್ಟ್ ಕೆಳಗೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಶಂಕಿತ ಪ್ರಕರಣಗಳ ಪರಿಶೀಲನೆ ಹಾಗೂ ಆರೋಗ್ಯ, ಕಂದಾಯ, ಪಂಚಾಯತ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ಸಭೆ ಜರುಗಿಸಿ, ಮಾತನಾಡಿದರು.

ಸಕಾಲಕ್ಕೆ ಸಾರ್ವಜನಿಕರಿಗೆ ಸ್ಪಂಧಿಸದೆ, ಅಧಿಕಾರಿಗಳ ನಿರ್ಲಕ್ಷ ಮತ್ತು ನಿಧಾನಗತಿಯಿಂದ ಯಾವುದೇ ಜೀವ ಹಾನಿ ಆದರೆ ನಿರ್ದಾಕ್ಷೀಣ್ಯವಾಗಿ ಕ್ರಮ ಜರುಗಿಸಲಾಗುತ್ತದೆ. ತಂಡಗಳಾಗಿ ಶಂಕಿತ ಪ್ರಕರಣಗಳಿರುವ ಗ್ರಾಮಗಳಿಗೆ ಅಧಿಕಾರಿ, ಸಿಬ್ಬಂದಿಗಳು ಭೇಟಿ ನೀಡಿ, ಜನರಿಗೆ ರೋಗಗಳ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು.

ಜ (2)

ಜಿಲ್ಲಾ ಆರೋಗ್ಯ ಅಧಿಕಾರಿ ಪ್ರತಿ ದಿನ ಡೆಂಗ್ಯೂ ಪ್ರಕರಣಗಳ ಕುರಿತು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಂದ ಮಾಹಿತಿ ಸಂಗ್ರಹಿಸಿ, ಜಿಲ್ಲಾಡಳಿತಕ್ಕೆ ಕಳುಹಿಸಬೇಕು. ಜಿಲ್ಲೆಯ ಗ್ರಾಮ ಪಂಚಾಯತವಾರು ಹಮ್ಮಿಕೊಳ್ಳುವ ಐಇಸಿ ಕಾರ್ಯಕ್ರಮಗಳ ಕುರಿತು ಪಟ್ಟಿ ತಯಾರಿಸಿ, ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಮುಮ್ಮಿಗಟ್ಟಿ ಮನೆಮನೆ ಸಮೀಕ್ಷೆ: ಧಾರವಾಡ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತ್ತು ಅವಳಿ ನಗರದ ಕೆಲವು ಶಹರ ಪ್ರದೇಶಗಳಲ್ಲಿ ಜ್ವರ ಪೀಡಿತರಿಂದಾಗಿ ಡೆಂಗ್ಯೂ ಶಂಕಿತರ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಅಧಿಕಾರಿಗಳು ಹೆಚ್ಚು ಮುಂಜಾಗ್ರತೆವಹಿಸಿ, ನಿಯಂತ್ರಣಕ್ಕೆ ಕ್ರಮವಹಿಸಬೇಕು.

ಜಿಲ್ಲಾ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್: ಜಿಲ್ಲೆಯಲ್ಲಿ ಕೀಟಜನ್ಯ ರೋಗಗಳು ಹೆಚ್ಚಳವಾದರೆ, ತುರ್ತು ಚಿಕಿತ್ಸೆ ಅಗತ್ಯವಿದ್ದಲ್ಲಿ ತಕ್ಷಣ ಸ್ಪಂದಿಸಲು ಜಿಲ್ಲಾ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು, ಚಿಕಿತ್ಸೆಗಾಗಿ ಬೆಡ್‍ಗಳನ್ನು ಮೀಸಲಿಡಬೇಕೆಂದು ಜಿಲ್ಲಾಧಿಕಾರಿಗಳು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಆರ್.ಸಿ.ಎಚ್.ಓ ಅಧಿಕಾರಿ ಡಾ.ಸುಜಾತಾ ಹಸವಿಮಠ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಪರುಶರಾಮ ಎಫ್.ಕೆ., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಬಿ., ತಹಸಿಲ್ದಾರಗಳಾದ ಬಸವರಾಜ ಬೆಣ್ಣಿಶಿರೂರ, ಪ್ರಕಾಶ ನಾಶಿ, ಸುಧೀರ ಸಾಹುಕಾರ, ಯಲ್ಲಪ್ಪ ಗೊಣೆನ್ನವರ, ‌

ಡಾ.ಡಿ.ಎಚ್.ಹೂಗಾರ, ಮಲೇರಿಯಾ ಕಾರ್ಯಕ್ರಮ ಅಧಿಕಾರಿ ಡಾ.ಮಂಜುನಾಥ ಸೊಪ್ಪಿಮಠ, ದಾರವಾಡ ತಾಲೂಕು ಪಂಚಾಯತ ಇಓ ಗಂಗಾಧರ ಕಂದಕೂರ ಸೇರಿದಂತೆ ಎಲ್ಲ ತಾಲೂಕು ಪಂಚಾಯತ ಇಓಗಳು, ಡಾ.ತನುಜಾ ಕೆ.ಎನ್., ಸೇರಿದಂತೆ ಎಲ್ಲ ತಾಲೂಕು ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮ ಅಧಿಕಾರಿಗಳು, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳು, ಪುರಸಭೆ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad