Bengaluru 23°C
Ad

ಪೊಲೀಸರಿಗೆ ಹಲ್ಲೆ ನಡೆಸಿ ತಪ್ಪಿಸಲು ಯತ್ನ: ಆರೋಪಿಗೆ ಗುಂಡಿನ ದಾಳಿ

17 ಕಳ್ಳತನ ಕೇಸ್​ನಲ್ಲಿ ಭಾಗಿಯಾಗಿದ್ದ ಆರೋಪಿಯ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿ: 17 ಕಳ್ಳತನ ಕೇಸ್​ನಲ್ಲಿ ಭಾಗಿಯಾಗಿದ್ದ ಆರೋಪಿಯ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಬಳಿ ಆರೋಪಿ ವಿನೋದ್ ಕಾಲಿಗೆ ಗುಂಡೇಟು ನೀಡಲಾಗಿದೆ. ಕಳ್ಳತನ ಪ್ರಕರಣದಲ್ಲಿ ನಿನ್ನೆ ವಿನೋದ್​ನನ್ನು ಪೊಲೀಸರು ಬಂಧಿಸಿದ್ದರು. ತನ್ನ ಸಹಚರರನ್ನು ತೋರಿಸುತ್ತೇನೆಂದು ಕರೆದೊಯ್ದಿದ್ದ ವಿನೋದ್, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್​ಪೆಕ್ಟರ್ ಜಯಶ್ರೀ ಛಲವಾದಿ, ಕಾನ್ಸ್​ಟೇಬಲ್ ರಮೇಶ್ ಹಿತ್ತಲಮನಿ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದ. ಆತ್ಮರಕ್ಷಣೆಗಾಗಿ ವಿನೋದ್ ಕಾಲಿಗೆ ಪಿಐ ಜಯಶ್ರೀ ಗುಂಡು ಹಾರಿಸಿದ್ದರು.

Ad
Ad
Nk Channel Final 21 09 2023