Bengaluru 22°C
Ad

ಇಸ್ರೋ ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವವು ಗುರುವಾರ ಜರುಗಲಿದ್ದು, ಈ ಘಟಿಕೋತ್ಸವದಲ್ಲಿ ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಕೃವಿವಿ ನಿರ್ಧರಿಸಿದೆ.

ಧಾರವಾಡ: ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವವು ಗುರುವಾರ ಜರುಗಲಿದ್ದು, ಈ ಘಟಿಕೋತ್ಸವದಲ್ಲಿ ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಕೃವಿವಿ ನಿರ್ಧರಿಸಿದೆ.

ಈ ಹಿನ್ನಲೆಯಲ್ಲಿ ಡಾ.ಸೋಮನಾಥ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನೆರವೇರಲಿದ್ದು, ರೈತರ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ಬೆಳಿಗ್ಗೆ 11:00 ಗಂಟೆಗೆ ನಡೆಯುವ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಕುಲಾಧಿಪತಿಯಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಹಿಸಲಿದ್ದಾರೆ.

ಪ್ರಸ್ತುತ ಈ 37ನೇ ಘಟಿಕೋತ್ಸವದಲ್ಲಿ 69 ಪಿಎಚ್.ಡಿ. 237 ಸ್ನಾತಕೋತ್ತರ ಹಾಗೂ 627 ಸ್ನಾತಕ ಪದವಿಗಳನ್ನೊಳಗೊಂಡಂತೆ ಒಟ್ಟು 933 ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುವುದು. ಇದರಲ್ಲಿ 745 ಅಭ್ಯರ್ಥಿಗಳು ಹಾಜರಾತಿಯಲ್ಲಿಯೂ ಹಾಗೂ 188 ಅಭ್ಯರ್ಥಿಗಳು ಗೈರು ಹಾಜರಾತಿಯಲ್ಲಿ ತಮ್ಮ ಪದವಿಗಳನ್ನು ಸ್ವೀಕರಿಸಲಿದ್ದಾರೆ. ಇದಲ್ಲದೇ 46 ಕೃಷಿ ವಿಶ್ವವಿದ್ಯಾಲಯ ಚಿನ್ನದ ಪದಕಗಳು, 10 ಇತರೆ ಚಿನ್ನದ ಪದಕಗಳು ಹಾಗೂ 09 ನಗದು ಬಹುಮಾನಗಳನ್ನು ಪ್ರತಿಭಾನ್ವಿತ ಅರ್ಹ ಅಭ್ಯರ್ಥಿಗಳಿಗೆ ನೀಡಲಾಗುವುದು ಎಂದು ಕೃಷಿ ವಿವಿಯ ಪ್ರಕಟಣೆ ತಿಳಿಸಿದೆ.

Ad
Ad
Nk Channel Final 21 09 2023
Ad