Ad

ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ

ಸಣ್ಣ ವಯಸ್ಸಿನ ಮಕ್ಕಳನ್ನು ವಿದ್ಯೆ ಕಲಿಯುವ ಹೊತ್ತಿನಲ್ಲಿ ದುಡಿಮೆಗೆ ಕಳಿಸಬಾರದು. ಇದು ಅಪರಾಧ. ಸರಕಾರ, ಸಂವಿಧಾನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಕಾನೂನು ರಚಿಸಿ, ಜಾರಿಗೊಳಿಸಿವೆ. ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ ಬೆಳೆಸಲು ನಾವು ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಧಾರವಾಡ : ಸಣ್ಣ ವಯಸ್ಸಿನ ಮಕ್ಕಳನ್ನು ವಿದ್ಯೆ ಕಲಿಯುವ ಹೊತ್ತಿನಲ್ಲಿ ದುಡಿಮೆಗೆ ಕಳಿಸಬಾರದು. ಇದು ಅಪರಾಧ. ಸರಕಾರ, ಸಂವಿಧಾನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಕಾನೂನು ರಚಿಸಿ, ಜಾರಿಗೊಳಿಸಿವೆ. ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ ಬೆಳೆಸಲು ನಾವು ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

Ad
300x250 2

ಅವರು ಇಂದು ಬೆಳಿಗ್ಗೆ ನಗರದ ಭಾರತ ಪ್ರೌಢಶಾಲೆಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ‌ ವಹಿಸಿ, ಮಾತನಾಡಿದರು.

ಬಾಲ ಮತ್ತು ಕಿಶೋರ ಮಕ್ಕಳನ್ನು ದುಡಿಮೆಗೆ ಕಳಿಸಬಾರದು. ಅವರಿಗೆ ಉತ್ತಮ ಸಂಸ್ಕಾರ ನೀಡಿ, ಶಿಕ್ಷಣ ಮತ್ತು ಕೌಶಲ್ಯಭರಿತ ತರಬೇತಿಯನ್ನು ನೀಡಬೇಕು. ಮಕ್ಕಳನ್ನು ಬೆಳೆಸುವಾಗ ಹೆಣ್ಣು ಗಂಡು ಎಂಬ ಭೇದವಿರಬಾರದು. ಇಬ್ಬರನ್ನು ಸಮಾನವಾಗಿ ಕಾಣಬೇಕು. ಸಂವಿಧಾನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವುದನ್ನು ಮೂಲಭೂತ ಹಕ್ಕಾಗಿ ಅವರಿಗೆ ಕಲ್ಪಿಸಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಎಫ್ ದೊಡ್ಡಮನಿ ಅವರು, ದೇಶದಲ್ಲಿ ಬಡತನ ಮತ್ತು ಶಿಕ್ಷಣದ ಕೊರತೆಯಿಂದಾಗಿ ಬಾಲ ಕಾರ್ಮಿಕ ಪದ್ದತಿ ಇಂದಿಗೂ ಮುಂದುವರಿದೆ. ಮಕ್ಕಳ ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಕಡ್ಡಾಯ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದೆ. ಇದರ ಬಗ್ಗೆ ಅರಿವು ಮೂಡಿಸಬೇಕೆಂದು ಹೇಳಿದರು.

ಪ (8)

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಬಾಲ ಕಾರ್ಮಿಕ ವಿರೋಧಿ ಕುರಿತ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ದತಿಯಿಂದ ಬಿಡುಗಡೆಯಾಗಿ ಶಾಲಾ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ, ಜಿಲ್ಲಾಧಿಕಾರಿಗಳು ಶೈಕ್ಷಣಿಕ ಕಿಟ್ ವಿತರಿಸಿದರು. ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಬಹುಮಾನ ವಿತರಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿರಿಯ ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ ಸ್ವಾಗತಿಸಿದರು. ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ವಂದಿಸಿದರು.

ವೇದಿಕೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಮರಾಠಾ ವಿದ್ಯಾಪ್ರಸಾರಕ ಮಂಡಳಿ ಅಧ್ಯಕ್ಷ ಎಂ.ಎನ್.ಮೋರೆ, ಉಪಾಧ್ಯಕ್ಷ ಯಲ್ಲಪ್ಪ ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ, ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ, ಪೊಲೀಸ್‌ ಅಧಿಕಾರಿ ಒಡೆಯರ್ ಇದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾದ ಅಕ್ರಮ ಅಲ್ಲಾಪುರ, ಭುವನೇಶ್ವರಿ ಕೋಟಿಮಠ, ಮೀನಾಕ್ಷಿ ಶಿಂದಿಹಟ್ಟಿ, ರಜನಿ ಹಿರೇಮಠ, ಸಂಗೀತಾ ಬೆನಕನಕೊಪ್ಪ, ಲತಾ ಟಿ.ಎಸ್. ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಭಾರತ ಪ್ರೌಢಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad