ಧಾರವಾಡ: ಮನೆಗೇ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾತ್ರೋರಾತ್ರಿ ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯಾದ ಯುವಕ ಎಂಬ ಮಾಹಿತಿ ತಿಳಿದು ಬಂದಿದೆ.

ಫೈರೋಜ್ ಪಠಾಣ್ ಮೊದಲು ಎನ್‌ಎಸ್‌ಯುಐನಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಯೂತ್ ಕಾಂಗ್ರೆಸ್ ಸೇರಿ ಪ್ರಧಾನ ಕಾರ್ಯದರ್ಶಿ ಆಯ್ಕೆಯಾದರು. ಸದ್ಯ ಸಕ್ರೀಯ ರಾಜಕಾರಣದಲ್ಲಿದ್ದ ಫೈರೋಜ್ ಇದ್ದರು. ಧಾರವಾಡ ಮಾಳಾಪುರದ ಹಾಶ್ಮಿನಗರದಲ್ಲಿರುವ ಫೈರೋಜ್ ಪಠಾಣ್ ಮನೆಗೆ ನುಗ್ಗಿ ಹತ್ಯೆ ಮಾಡಲಾಗಿದೆ.

ಬರ್ಬರವಾಗಿ ಚಾಕುವಿನಿಂದ ದಾಳಿ ಮಾಡಿ, ಚಾಕು ಇರಿತದಿಂದ ಫೈರೋಜ್ ಮನೆಯಲ್ಲೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಫೈರೋಜ್ ಮನೆಯಲ್ಲೇ ಸಾವನ್ನಪ್ಪಿದ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ಹೈಳೆ ವೈಷ್ಯಮೆ ಹಿನ್ನಲೆ ಫೈರೋಜ್ ಅವರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗದೆ.

ಕೊಲೆ ಮಾಡಿದವರೂ ಕೂಡ ಸ್ಥಳೀಯರೇ ಇದ್ದಾರೆ ಎಂದು ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೈರೋಜ್ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಧಾರವಾಡ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

View this post on Instagram

A post shared by News Karnataka (@newskarnataka)