Ad

ರಾಜ್ಯಾದ್ಯಂತ ಸರ್ಕಾರಿ ಶಾಲೆ,ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಪೂರೈಕೆ

ರಾಜ್ಯಾದ್ಯಂತ ಇನ್ನುಮುಂದೆ ಸರ್ಕಾರಿ ಸ್ವಾಮ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು : ರಾಜ್ಯಾದ್ಯಂತ ಇನ್ನುಮುಂದೆ ಸರ್ಕಾರಿ ಸ್ವಾಮ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

Ad
300x250 2

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಎಲ್ಲ ಸರ್ಕಾರಿ ಶಾಲೆ ಹಾಗೂ ಪದವಿ ಕಾಲೇಜು ಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ನಿರ್ಧಾರ ಮಾಡಲಾಗಿದೆ. 29.15 ಕೋಟಿ ರೂ.ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಹಾಗೂ ಉಚಿತ ನೀರಿನ ಸೌಲಭ್ಯ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

 

Ad
Ad
Nk Channel Final 21 09 2023
Ad