ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಘಟನೆ ನಡೆದಿದೆ.
ರಾಬರಿ ಕೇಸ್‌ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಬಂದಿದ್ದ ಪೊಲೀಸರ ಮೇಲೆ ರೌಡಿ ಶೀಟರ್ ಸಂಜಯ್ ಕೊಪ್ಪದ ಹಲ್ಲೆಗೆ ಯತ್ನಿಸಿದ್ದನು. ಪೊಲೀಸರ ಮೇಲೆ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಆರೋಪಿ ಸಂಜಯ್ ಮೇಲೆ ಪಿಎಸ್‌ಐ ಸಂಗಮೇಶ್ ಶಿವಯೋಗಿ ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ್ ಕೈ, ಕಾಲಿಗೆ ಗಾಯಗಳಾಗಿವೆ. ಸಂಜಯ್ ವಿರುದ್ಧ ರಾಬರಿ, ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ 12 ಕೇಸ್ ದಾಖಲಾಗಿವೆ. ಗಾಯಗೊಂಡ ಆರೋಪಿ ಸಂಜಯ್ ಕೊಪ್ಪದ್ ಹಾಗೂ ಪಿಸಿ ಪ್ರಕಾಶ್‌ಗೆ ಜಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

