ಗದಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಇಂದು (ಸೆ.15) ಬೀದರ್‌ನಿಂದ ಚಾಮರಾಜನಗರದವರೆಗೆ ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.ಇತ್ತ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ತಾಲ್ಲೂಕಿನ ಬಾಲೆಹೊಸೂರು ಸಮೀಪ ಇಂದು ನಡೆದಿದೆ.
ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದರಿಂದ ಗಲಿಬಿಲಿಗೊಂಡ ವಿದ್ಯಾರ್ಥಿಗಳು, ಶಿಕ್ಷಕರು ದಿಕ್ಕಾಪಾಲಾಗಿ ಓಡಿದರು. ಘಟನೆಯಲ್ಲಿ 15ರಿಂದ 20 ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಹೆಜ್ಜೇನು ಕಡಿದಿದ್ದು, ಹೆಚ್ಚಿನ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
Ad