ಗದಗ: ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ನಡೆದಿದೆ.
ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ (12) ಮೃತ ದುರ್ದೈಗಳು. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಕಲ್ಲಾಪೂರ ಬಸವೇಶ್ವರ ದೇವಸ್ಥಾನ ಜಾತ್ರೆಗೆ ಹೊರಟ್ಟಿದ್ದರು.
ಆಗ ಇಳಕಲ್ನಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ ಸಾರಿಗೆ ಬಸ್ ಡಿಕ್ಕಿ ಏಕಾಏಕಿ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.