Categories: ಕರ್ನಾಟಕ

ನಾಡಿನೆಲ್ಲೆಡೆ ಇಂದು ಗಣೇಶ ಹಬ್ಬದ ಸಂಭ್ರಮ

ಹಿಂದೂ ಧರ್ಮೀಯರ ಪವಿತ್ರ ದೊಡ್ಡ ಹಬ್ಬ ಗೌರಿ-ಗಣೇಶ ಚತುರ್ಥಿಯನ್ನು ಇಂದು ನಾಡಿನೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಗಣೇಶ ಚತುರ್ದಶಿ, ವಿನಾಯಕ ಚತುರ್ದಶಿ ಅಥವಾ ಗಣೇಶ ಚತುರ್ಥಿ ಎಂದು ಕರೆಯಲ್ಪಡುವ ಈ ಹಬ್ಬವು ದೇಶದ ಪ್ರಮುಖ ರಜಾದಿನಗಳಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಭಾರತವು ಈ ಹಬ್ಬವನ್ನು ಅತ್ಯಂತ ವೈಭವದಿಂದ ಮತ್ತು ಉತ್ಸಾಹದಿಂದ ಆಚರಿಸುತ್ತದೆ.

ಮುಂಜಾನೆಯೇ ಮನೆಯಲ್ಲಿ ಹೆಂಗಳೆಯರು ಮಕ್ಕಳು ಎದ್ದು ಮನೆ ಮುಂದೆ ಸಾರಿಸಿ ರಂಗೋಲಿ ಬಳಿದು ತೋರಣ ಕಟ್ಟಿ ಹಬ್ಬವನ್ನು ಸ್ವಾಗತಿಸುತ್ತಿದ್ದಾರೆ. ಬೆಳಗ್ಗೆಯೇ ಸ್ನಾನ ಮಾಡಿ ದೇವರ ಮನೆಯಲ್ಲಿ ಗಣೇಶ ಮೂರ್ತಿ ಇಟ್ಟು ಅಲಂಕಾರ ಮಾಡಿ, ನೈವೇದ್ಯ ಮಾಡಿ ಗೌರಿ-ಗಣೇಶ ಸ್ತೋತ್ರ, ದೇವರ ನಾಮ, ಅಷ್ಟೋತ್ತರಗಳನ್ನು ಮನೆಯವರೆಲ್ಲಾ ಸೇರಿ ಹೇಳಿ ಭಕ್ತಿಯಿಂದ ಪೂಜೆ ಮಾಡುತ್ತಿದ್ದಾರೆ.

ಈ ವರ್ಷ, ಇದು ಸೆಪ್ಟೆಂಬರ್ 19 ರಿಂದ 28 ರವರೆಗೆ ನಡೆಯಲಿದೆ. ಕೆಲವೆಡೆ ಸೆಪ್ಟೆಂಬರ್‌ 18 ರಂದು ಕೂಡ ಆಚರಿಸುತ್ತಾರೆ. ಹತ್ತು ದಿನಗಳ ಕಾಲ ನಡೆಯುವ ಈ ಹಬ್ಬವು ಗಣೇಶನ ಜನ್ಮವನ್ನು ಸುಂದರವಾಗಿ ಸ್ಮರಿಸುತ್ತದೆ ಮತ್ತು ಜನರು ಬುದ್ಧಿವಂತಿಕೆ, ಸಮೃದ್ಧಿ, ಅದೃಷ್ಟ ಮತ್ತು ಶುಭ ಫಲಕ್ಕಾಗಿ ಗಣೇಶನ ಆಶೀರ್ವಾದವನ್ನು ಕೋರಿ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ.

ಗಣೇಶ ಚತುರ್ಥಿಯು ಮಹಾರಾಷ್ಟ್ರದಲ್ಲಿ 12 ನೇ ಶತಮಾನದಲ್ಲಿ ಹುಟ್ಟಿಕೊಂಡಿದೆ ಎನ್ನುವ ನಂಬಿಕೆಯಿದೆ. ಈ ಹಬ್ಬವನ್ನು ಮರಾಠ ರಾಜ ಶಿವಾಜಿ ಮಹಾರಾಜರು ಜನಪ್ರಿಯಗೊಳಿಸಿದರು ಎನ್ನಲಾಗುತ್ತದೆ.

ಬುದ್ಧಿವಂತಿಕೆ, ಸಮೃದ್ಧಿ ಮತ್ತು ಅದೃಷ್ಟದ ದೇವರಾದ ಆನೆಯ ತಲೆಯುಳ್ಳ ಗಣೇಶನ ಜನ್ಮವನ್ನು ಗುರುತಿಸಲು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಗಣೇಶನು ಅಡೆತಡೆಗಳನ್ನು ನಿವಾರಿಸುತ್ತಾನೆ ಮತ್ತು ಅದೃಷ್ಟವನ್ನು ತರುತ್ತಾನೆ. ಈ ಹಬ್ಬವು ಹಿಂದೂಗಳು ಒಗ್ಗೂಡಲು ಹಾಗೂ ಅವರ ಸಂಸ್ಕೃತಿ ಮತ್ತು ಪರಂಪರೆಯನ್ನು ಆಚರಿಸಲು ಉತ್ತಮ ದಿನವಾಗಿದೆ.

ಅಕಾಲಿಕ ಮಳೆಯಿಂದ ಹಬ್ಬಕ್ಕೂ ಕೊಂಚ ಎಫೆಕ್ಟ್ ತಟ್ಟಿದ್ದು ಹೂ-ಹಣ್ಣುಗಳ ದರ ನಿಯಮಿತವಾಗಿ ಏರಿಕೆಯಾಗಿದೆ. ಹೂ-ಹಣ್ಣು, ಎಕ್ಕದ ಹೂ ಹಾರ, ಗರಿಕೆಗೆ ಭಾರೀ ಬೇಡಿಕೆಯಿದ್ದು, ಖರೀದಿಸಲು ಬಂದವರಿಗೆ ಹೂ-ಹಣ್ಣಿನ ಸ್ವಲ್ಪ ಮಟ್ಟಿನ ದರ ಹೆಚ್ಚಳದಿಂದ ಕೊಂಚ ಬೇಸರವಾದರೂ, ಹಬ್ಬಕ್ಕೆ ಭರ್ಜರಿಯಾಗೇ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

6 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

7 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

7 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago