Ad

ಮನೆ ಬಾಗಿಲಿಗೆ ಬರಲಿದ್ದಾರೆ ವೈದ್ಯರು: ರಾಜ್ಯ ಸರ್ಕಾರದಿಂದ ಮಹತ್ವದ ಯೋಜನೆ ಜಾರಿ

Cn

ಬೆಂಗಳೂರು: ಮನೆ ಬಾಗಿಲಲ್ಲಿಯೇ ತಪಾಸಣೆ ನಡೆಸಿ, ಅಗತ್ಯ ಔಷಧಿಗಳನ್ನು ಒದಗಿಸುವ ಗೃಹ ಆರೋಗ್ಯ ಯೋಜನೆಯನ್ನು ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಲ್ಲಿ ಕೆಲವರು ನಿಯಮಿತವಾಗಿ ಮಾತ್ರೆಗಳನ್ನು ಸೇವಿಸುತ್ತಿಲ್ಲ.

ಆರ್ಥಿಕ ಹೊರೆ ಸೇರಿ ವಿವಿಧ ಕಾರಣಗಳಿಂದ ಮಾತ್ರೆಗಳನ್ನು ಖರೀದಿಸುತ್ತಿಲ್ಲ. ಗೃಹ ಆರೋಗ್ಯ ಯೋಜನೆಯಡಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Ad
Ad
Nk Channel Final 21 09 2023