News Karnataka Kannada
Monday, April 22 2024
Cricket
ಕರ್ನಾಟಕ

‘ಶಾಲಾ-ಕಾಲೇಜು’ಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ: ರಾಜ್ಯ ಸರ್ಕಾರ !

Rj
Photo Credit : News Kannada

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬವನ್ನು ಮಾತ್ರವೇ ಆಚರಿಸಬೇಕು. ಅದರ ಹೊರತಾಗಿ ಬೇರೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಸುತ್ತೋಲೆ ಹೊರಡಿಸಲಾಗಿದೆ.

ಅದರಲ್ಲಿ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರವೇ ಆಚರಿಸುವಂತೆ ತಿಳಿಸಲಾಗಿದೆ.

ಈ ಸುತ್ತೋಲೆಯನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ ಸೂಚನೆಯ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಘ ಹೊರಡಿಸಿದೆ. ಆ ಸುತ್ತೋಲೆಯಲ್ಲಿ 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರವೇ ಶಾಲೆ, ಕಾಲೇಜುಗಳಲ್ಲಿ ಆಚರಿಸಬೇಕು. ಧಾರ್ಮಿಕ ಹಬ್ಬ ಆಚರಿಸದಂತೆ ಸೂಚಿಸಲಾಗಿದೆ.

ಒಂದು ವೇಳೆ ಈ ಆದೇಶ ಉಲ್ಲಂಘಿಸಿ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಿದ್ರೇ ಪ್ರಾಂಶುಪಾಲರು, ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

ಅಂದಹಾಗೇ ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾಂತಿ, ಯುಗಾದಿ, ರಂಜಾನ್ ಸೇರಿದಂತೆ ವಿವಿಧ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂಬುದಾಗಿ ಸುತ್ತೋಲೆಯ ಆದೇಶದಲ್ಲಿ ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು