Ad

ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್; ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ

Govt

ಬೆಂಗಳೂರು: ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಲಾಗಿದೆ.

Ad
300x250 2

ಹೌದು… ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಇದರಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾರದ ಒಂದು ದಿನ ಸಂಪೂರ್ಣ ರಜೆ ನೀಡಬೇಕು ಎಂದು ಪೌರ ಕಾರ್ಮಿಕರು ಮನವಿ ಮಾಡಿದ್ದರು. ಇದೀಗ ನಗರಾಭಿವೃದ್ಧಿ ಇಲಾಖೆ ಪೌರ ಕಾರ್ಮಿಕರ ಮನವಿಗೆ ಸ್ಪಂದಿಸಿದ್ದು, ನಿತ್ಯದ ಕೆಲಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಂಡು ಇಡೀ ದಿನದ ರಜೆ ನೀಡಲು ಆದೇಶಿಸಿದೆ.

ಪ್ರಸ್ತುತ ಪೌರ ಕಾರ್ಮಿಕರಿಗೆ ವಾರಕ್ಕೆ ಎರಡು ಬಾರಿ ಅರ್ಧ ದಿನ ರಜೆ ನೀಡಲಾಗುತ್ತಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಬುಧವಾರ, ಭಾನುವಾರ 11 ಗಂಟೆವರೆಗೂ ಕೆಲಸ ಆಮೇಲೆ ರಜೆ ನೀಡಲಾಗುತ್ತಿತ್ತು, ಇದೀಗ ವಾರದಲ್ಲಿ ಒಂದು ದಿನ ಪೂರ್ತಿ ರಜೆ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.

 

Ad
Ad
Nk Channel Final 21 09 2023
Ad