ಹಾಸನ: ಇಂದು ದೇಶದೆಲ್ಲಡೆ 78ನೇ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ 2500 ಅಡಿ ಉದ್ದ ಧ್ವಜ ಪ್ರದರ್ಶನ ಮಾಡಿರುವುದು ಗಮನಸೆಳೆಯಿತು. ಜಿಲ್ಲಾಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಆಯೋಜಿಸಿದ್ದ ಕಾರ್ಯಕ್ರಮಲ್ಲಿ ಬೃಹತ್ ಧ್ವಜ ಹಿಡಿದು 3000 ಸಾವಿರ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿದರು.
ಹಾಸನ ನಗರದ ಪ್ರಮುಖ ರಸ್ತೆಗಳಲ್ಲಿ ಬಾವುಟ ಹಿಡಿದು ವಿದ್ಯಾರ್ಥಿಗಳು ಸಾಗಿದರು. ಡಿಸಿ ಕಚೇರಿ ಮುಂಭಾಗದಿಂದ ಎನ್.ಆರ್.ವೃತ್ತ, ಹೇಮಾವತಿ ಪ್ರತಿಮೆ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೂ ಧ್ವಜ ಹಿಡಿದು ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಾಗಿದರು.

