Bengaluru 17°C

ಸಕಲೇಶಪುರದಲ್ಲಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ: ದಿಢೀರ್ ರೈಲು ಸಂಚಾರ ಸ್ಥಗಿತ

ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ದಿಢೀರ್ ಸ್ಥಗಿತಗೊಳಿಸಲಾಗಿದೆ.

ಹಾಸನ: ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ದಿಢೀರ್ ಸ್ಥಗಿತಗೊಳಿಸಲಾಗಿದೆ.


ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಈಗ ಮಣ್ಣು ಕುಸಿದಿದೆ.


ಇದರಿಂದಾಗಿ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಕಳೆದ ಅರ್ಧ ಗಂಟೆಯಿಂದ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಿಂತಿದೆ. ರೈಲು ನಿಲುಗಡೆಯಿಂದ ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ಪರದಾಟ ಅನುಭವಿಸಿದ್ದಾರೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ.


Nk Channel Final 21 09 2023