ಹಾಸನ: ಅಪರಿಚಿತ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮೋಕಳಿ ಬಳಿ ನಡೆದಿದೆ.
ಪಾತಕಿಗಳು ವ್ಯಕ್ತಿಯನ್ನು ಕೊಲೆಗೈದು ಕೈ-ಕಾಲು ಕಟ್ಟಿ ಮೃತದೇಹವನ್ನು ಕೆರೆಗೆ ಎಸೆದಿದ್ದಾರೆ. ಅಂದಾಜು 55 ವರ್ಷದ ವ್ಯಕ್ತಿಯ ಮೃತದೇಹಕ್ಕೆ ಕಲ್ಲು ಕಟ್ಟಿ ಹಂತಕರು ಕೆರೆಗೆ ಎಸೆದಿರುವುದು ಕಂಡು ಬಂದಿದೆ.
ನಿನ್ನೆ ಭಾನುವಾರ ಕೆರೆಯಲ್ಲಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
Ad