ಹಾಸನ: ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.
ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಬಳಿ ಯೋಜನೆ ಉದ್ಘಾಟನೆ ಮಾಡಲಾಯಿತು. ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದ ಸಿಎಂ, ದೊಡ್ಡನಾಗರದ 9ನೇ ಪಂಪ್ ಹೌಸ್ನಲ್ಲಿ ಕಂಪ್ಯೂಟರ್ ಮೂಲಕ ಮೋಟರ್ ಆನ್ ಮಾಡಿದರು. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಸಿಎಂಗೆ ಸಾಥ್ ನೀಡಿದರು.
ಉದ್ಘಾಟನೆಗೂ ಮುನ್ನ ಸಿಎಂ ಪೂಜೆ ಸಲ್ಲಿಸಿದರು. ಇಂದಿನಿಂದ ಎತ್ತಿನಹೊಳೆ ಕಾಲುವೆಯಲ್ಲಿ ಪಶ್ಚಿಮಘಟ್ಟದ ನೀರು ಹರಿಯಲಿದೆ. ಬಯಲುಸೀಮೆಯತ್ತ ಮಲೆನಾಡ ನೀರು ಹರಿಯಲಿದೆ.
LIVE : ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆಯ ಮೊದಲನೇ ಹಂತದ ಲೋಕಾರ್ಪಣೆ. https://t.co/bI9NkXAGvB
— Karnataka Congress (@INCKarnataka) September 6, 2024

