ಹಾಸನ: ಸಲಿಂಗ ಕಾಮ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಡಿಜಿ ಕಚೇರಿಯಲ್ಲಿ ಶುಕ್ರವಾರ ಸಂತ್ರಸ್ತ, ಜೆಡಿಎಸ್‌ ಕಾರ್ಯಕರ್ತ ದೂರು ನೀಡಿದ್ದರು. ಹಾಸನ ಎಸ್‌ಪಿಗೆ ದೂರಿನ ಪ್ರತಿ ಮೇಲ್ ಮಾಡಲಾಗಿತ್ತು. ಇ- ಮೇಲ್ ಆಧರಿಸಿ ಸಂತ್ರಸ್ತನನ್ನು ಕರೆಸಿ ಮಾಹಿತಿ ಪಡೆದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಮತ್ತೊಂದೆಡೆ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಅಲ್ಲಗಳೆದಿರುವ ಸೂರಜ್‌ ರೇವಣ್ಣ, ಆಡಿಯೊ ವೈರಲ್‌ ಸಂಬಂಧ ಪ್ರತಿ ದೂರು ದಾಖಲಿಸಲು ಮುಂದಾಗಿದ್ದಾರೆ.