Bengaluru 23°C
Ad

ಮಾರಕ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ : ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಮಾರಕ ಡೆಂಘೀ ಜ್ವರಕ್ಕೆ ಬಾಲಕಿ ಬಲಿಯಾಗಿರೋ ಘಟನೆ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕ್ಷತಾ (13) ಮೃತಪಟ್ಟ ಬಾಲಕಿ.

ಹಾಸನ: ಮಾರಕ ಡೆಂಘೀ ಜ್ವರಕ್ಕೆ ಬಾಲಕಿ ಬಲಿಯಾಗಿರೋ ಘಟನೆ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕ್ಷತಾ (13) ಮೃತಪಟ್ಟ ಬಾಲಕಿ. ಮೃತ ಬಾಲಕಿ ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದಳು. ಮೃತ ಅಕ್ಷತಾ ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಪದ್ಮ ದಂಪತಿ ಪುತ್ರಿಯಾಗಿದ್ದಳು. ಕಳೆದ ಬುಧವಾರ ಬಾಲಕಿ ಜ್ವರದಿಂದ ಬಳಲುತ್ತಿದ್ದಳು.

Ad
300x250 2

ಸ್ಥಿತಿ ಕೈ ಮೀರುತ್ತಿದ್ದಂತೆ ಆಕೆಯನ್ನು ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಎಷ್ಟೇ ಚಿಕಿತ್ಸೆ ನೀಡಿದರೂ, ಬಾಲಕಿ ಗುಣಮಖಳಾಗಿರಲಿಲ್ಲ. ಹೀಗಾಗಿ ಪೋಷಕರು ಆಕೆಯನ್ನು ಹೆಚ್ಚಿನ ಚಿಕಿತ್ಸೆ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲೂ ಚೇತರಿಸಿಕೊಳ್ಳದ ಅಕ್ಷತಾಳನ್ನು ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ನಂತರ ಡಾಕ್ಟರ್‌ ಸಲಹೆ ಪ್ರಕಾರ ಜಿಲ್ಲಾ ಆಸಪತ್ರೆಗೂ ಕರೆದೊಯ್ಯಲಾಯಿತು ಆದರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಮುದ್ದಾದ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Ad
Ad
Nk Channel Final 21 09 2023
Ad