Bengaluru 22°C
Ad

ಹಾಸನದಲ್ಲಿ ಡೆಂಗ್ಯೂ ಜ್ವರಕ್ಕೆ 13 ವರ್ಷದ ಬಾಲಕಿ ಮೃತ್ಯು

ಡೆಂಗ್ಯೂ ಜ್ವರಕ್ಕೆ 13 ವರ್ಷದ ಬಾಲಕಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಾಸನ: ಡೆಂಗ್ಯೂ ಜ್ವರಕ್ಕೆ 13 ವರ್ಷದ ಬಾಲಕಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ.

Ad
300x250 2

ಅಕ್ಷತಾ (13) ಮೃತ ಬಾಲಕಿ. ಅಕ್ಷತಾ ಮೂಲತಃ ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರು. ಕೂಲಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿ ಪುತ್ರಿ ಅಕ್ಷತಾ, ಹಾಸನದ ಖಾಸಗಿ ಶಾಲೆಯಲ್ಲಿ 7ನೇ ತರಗತಿ‌ ಓದುತ್ತಿದ್ದರು.

ಕಳೆದ ಬುಧವಾರ ಜ್ವರಕ್ಕೆ ತುತ್ತಾಗಿದ್ದರು. ನಂತರ ಬಾಲಕಿಗೆ ಬೊಮ್ಮನಾಯಕಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದಾಗ್ಯೂ ಬಾಲಕಿ ಗುಣಮುಖಳಾಗದೇ ಇದ್ದ ಕಾರಣ ಪೋಷಕರು ಆಕೆಯನ್ನ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಅಕ್ಷತಾ ಆರೋಗ್ಯದಲ್ಲಿ ಚೇತರಿಕೆ ಕಾಣದೇ ಮತ್ತೊಂದು ಆಸ್ಪತ್ರೆಗೆ ದಾಖಲಿಸಿದ್ದರು.

ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗುವಂತೆ ಖಾಸಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ನಂತರ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.

Ad
Ad
Nk Channel Final 21 09 2023
Ad