Bengaluru 23°C
Ad

ಹಾಸನ: 30 ಕ್ಕೂ ಹೆಚ್ಚು ಮಂದಿಗೆ ಕಚ್ಚಿ ಗಾಯ ಮಾಡಿದ ಹುಚ್ಚು ನಾಯಿ

ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ ಘಟನೆ ನಗರಸಭೆಯ 12ನೇ ವಾರ್ಡ್ ವ್ಯಾಪ್ತಿಯಲ್ಲಿ  ನಡೆದಿದೆ.

ಹಾಸನ: ಹಾಸನದ ಸಿದ್ದಯ್ಯನಗರದಲ್ಲಿ ಹುಚ್ಚು ನಾಯಿಯೊಂದು ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

ಹುಚ್ಚು ನಾಯಿ ಸುಮಾರು ಮೂವತ್ತಕ್ಕೂ ಹೆಚ್ಚು ಮಂದಿಗೆ ತೀವ್ರವಾಗಿ ಕಚ್ಚಿ ಗಾಯಗೊಳಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹುಚ್ಚು ನಾಯಿಯೊಂದು ನಡೆದು ಹೋಗುತ್ತಿದ್ದ ವೇಳೆ , ಮಹಿಳೆಯರು, ಪುರುಷರು, ಮಕ್ಕಳು ಸೇರಿ ಸುಮಾರು ಮೂವತ್ತಕ್ಕೂ ಹೆಚ್ಚು ಮಂದಿಗೆ ಭೀಕರವಾಗಿ ಕಚ್ಚಿ ಗಾಯಗೊಳಿಸಿದೆ. ಮುಖ, ಕೈ, ಕಾಲುಗಳಿಗೆ ತೀವ್ರವಾಗಿ ಕಚ್ಚಿ ಮಾಂಸ ಕಂಡವನ್ನೇ ಕಿತ್ತು ಹಾಕಿದೆ.

ಹುಚ್ಚು ನಾಯಿ ಸೆರೆ ಹಿಡಿಯಲು ನಗರಸಭೆ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಆದರೆ ನಾಯಿ ಪತ್ತೆಯಾಗಿಲ್ಲ. ಹುಚ್ಚು ನಾಯಿ ಕಾಟದಿಂದ ಮನೆಯಿಂದ ಹೊರಗೆ ಬರಲು ನಿವಾಸಿಗಳು ಹೆದರುತ್ತಿದ್ದಾರೆ.

ಬಡಾವಣೆಯ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದು ಹುಚ್ಚು ನಾಯಿ ದಾಳಿಗೆ ಒಳಗಾಗಿರುವವರೆ ಸೂಕ್ತ ಚಿಕಿತ್ಸೆ ಹಾಗೂ ಚಿಕಿತ್ಸಾ ವೆಚ್ಚವನ್ನು ಭರಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

Ad
Ad
Nk Channel Final 21 09 2023
Ad