Bengaluru 22°C
Ad

ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಾಗಿ ನಿಲ್ಲುತ್ತೇನೆ: ಎಚ್.ಡಿ ರೇವಣ್ಣ

ನಾನು ಬದುಕಿರು ವವರೆಗೆ ಜಿಲ್ಲೆಯ ಜನರ ಸಹಕಾರಕ್ಕೆ ಋಣಿಯಾಗಿರುತ್ತೇನೆ. ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಜತೆಯಾಗಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.

ಹಾಸನ: ನಾನು ಬದುಕಿರು ವವರೆಗೆ ಜಿಲ್ಲೆಯ ಜನರ ಸಹಕಾರಕ್ಕೆ ಋಣಿಯಾಗಿರುತ್ತೇನೆ. ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಾಗಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.

ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಪ್ರಕರ ಣ ಇರುವಾಗ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ. ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ನಾನು ದೇವರ ಮೇಲೆ ನಂಬಿಕೆ ಇಟ್ಟಿರುವವನು ಎಂದರು.

ರಾಜ್ಯದ, ಜಿಲ್ಲೆಯ ಹಾಗೂ ಹೊಳೆನರಸೀಪುರದ ಜನರು ದೇವೇಗೌಡರಿಗೆ ಅರವತ್ತು ವರ್ಷದಿಂದ ರಾಜಕೀಯ ಶಕ್ತಿ ಕೊಟ್ಟಿದ್ದಾರೆ. ಕುಮಾರಸ್ವಾಮಿ, ನನಗೆ ಶಕ್ತಿ ಕೊಟ್ಟಿದ್ದಾರೆ. ಇಪ್ಪತ್ತೈದು ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಹೊಳೆನರಸೀಪುರ ತಾಲ್ಲೂಕಿನ ಜನರು, ಜಿಲ್ಲೆಯ ಜನರ ಜತೆ ನಾನು ಬದುಕಿರುವವರೆಗೂ ಇರುತ್ತೇನೆ. ನಿಮ್ಮ ಜತೆ ನಾನು, ದೇವೇಗೌಡರು, ಕುಮಾರಸ್ವಾಮಿ ಹಾಗೂ ನಮ್ಮ ಕುಟುಂಬ ಇರುತ್ತದೆ. ಯಾರೂ ದೃತಿಗೆಡಬೇಕಾದ ಪ್ರಮೇಯವಿಲ್ಲ. ಜಿಲ್ಲೆಯ ಜನ ನನಗೆ ಸಹಕಾರ ಕೊಟ್ಟಿದ್ದಾರೆ, ಆ ಸಹಕಾರಕ್ಕೆ ನಾನು ಋಣಿಯಾ ಗಿರುತ್ತೇನೆ ಎಂದರು.

ಇದಕ್ಕೂ ಮೊದಲು ಹೊಳೆ ನರಸೀಪುರದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಎಚ್.ಡಿ.ರೇವಣ್ಣ ವಿಶೇಷ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಸೇರಿದಂತೆ ಕುಟುಂಬ ಸದಸ್ಯರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.

ಸಂಸದ ಪ್ರಜ್ವಲ್ ರೇವಣ್ಣ ವಿಚಾರ ಏನೂ ಗೊತ್ತಿಲ್ಲ, ನಾನು ಯಾರ ಬಗ್ಗೆಯೂ ಮಾತನಾಡಲ್ಲ ಎಂದು ರೇವಣ್ಣ ಪ್ರತಿಕ್ರಿಯಿಸಿದರು.  ಪ್ರಜ್ವಲ್ ರೇವಣ್ಣ ವಿದೇಶದಿಂದ ಬರುವ ವಿಚಾರವಾಗಿ ಮಾತನಾಡಲು ನಿರಾಕರಿಸಿದ ಅವರು ಅದರ ಬಗ್ಗೆ ನನಗೇನೂ ಗೊತ್ತಿಲ್ಲ . ಲೈಂಗಿಕ ದೌರ್ಜನ್ಯ ಪ್ರಕರಣ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಪರಿಣಾಮ ಬೀರುವ ಬಗ್ಗೆ ಕೇಳಿದ ಪ್ರಶ್ನೆಗೂ ಅದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದರು.

Ad
Ad
Nk Channel Final 21 09 2023
Ad