Bengaluru 26°C
Ad

ಅಸಮರ್ಪಕ ನೀರು ಪೂರೈಕೆ : ಖಾಲಿ ಕೊಡ ಹಿಡಿದು ಪ್ರತಿಭಟನೆ

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಸಾರ್ವಜ ನಿಕರು ಪ್ರತಿಭಟನೆ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ನೆಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ.

ಹಾಸನ: ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಸಾರ್ವಜ ನಿಕರು ಪ್ರತಿಭಟನೆ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ನೆಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ.

ಖಾಲಿ ಕೊಡದೊಂದಿಗೆ ನೀರಿಗಾಗಿ ಘೋಷಣೆ ಕೂಗಿದ ಪ್ರತಿಭಟನಾಕಾರರು ಸಮರ್ಪಕ ನೀರು ಪೂರೈಕೆ ಮಾಡದ ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ವಾರಕ್ಕೆ ಒಮ್ಮೆ ಮಾತ್ರ ನೀರು ಬಿಡಲಾಗುತ್ತಿದ್ದು, ಅದಕ್ಕೂ ಕೆಸರು ಮಿಶ್ರಿತ ನೀರು ಬಿಡಲಾಗುತ್ತಿದೆ. ಈ ಬಗ್ಗೆ ಗ್ರಾ.ಪಂ. ಗಮನಕ್ಕೆ ತಂದರೂ ಯಾರೂ ಗಮ ನಹರಿಸಿಲ್ಲ ಎಂದು ಆರೋಪಿಸಿದರು.

ಪ್ರತಿಭಟನಾ ಸ್ಥಳದಿಂದಲೇ ಶಾಸಕರಿಗೆ ಕರೆ ಮಾಡಿದ ಗ್ರಾಮಸ್ಥರೊಂದಿಗೆ ಮಾತನಾಡಿದ ಶಾಸಕ ಎಚ್.ಕೆ.ಸುರೇಶ್, ಕುಡಿಯುವ ನೀರಿನ ಸಮಸ್ಯೆ ಬಗೆಗಿನ ಸಮಸ್ಯೆ ಆಲಿಸಿದರು. ಕುಡಿಯುವ ನೀರು ಸಮಸ್ಯೆ ಬಗೆಹರಿಸಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂಬ ಶಾಸಕರ ಭರವಸೆ ನಂತರ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

Ad
Ad
Nk Channel Final 21 09 2023
Ad