Bengaluru 28°C
Ad

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಇಂದು(ಗುರುವಾರ) ಮಧ್ಯಾಹ್ನ ಹಾಸನ ಜಿಲ್ಲೆ‌ಯ ಅರಕಲಗೂಡು ತಾಲೂಕಿನ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಹಾಸನ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಇಂದು ಮಧ್ಯಾಹ್ನ ಹಾಸನ ಜಿಲ್ಲೆ‌ಯ ಅರಕಲಗೂಡು ತಾಲೂಕಿನ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಕೂಡಲೇ ತಾಲೂಕಿನ ಕೊಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮಧ್ಯಾಹ್ನ ಹಲ್ಲಿ ಬಿದ್ದು ಕಲುಷಿತಗೊಂಡ ಅಹಾರವನ್ನು ಸೇವಿಸಿದ ನೂರಾರು ಮಕ್ಕಳು ಏಕಾಎಕಿ ವಾಂತಿಯಿಂದ ಬಳಲು ಶುರುಮಾಡಿದ್ದಾರೆ. ಇದನ್ನು ಗಮನಿಸಿದ ಶಿಕ್ಷಕರು, ಕೂಡಲೇ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಇದೀಗ ಸುರಕ್ಷತಾ ಕ್ರಮ ವಹಿಸದ ಶಾಲಾ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ಹೊರಹಾಕುತ್ತಿದ್ದಾರೆ.

Ad
Ad
Nk Channel Final 21 09 2023