Bengaluru 23°C
Ad

ಪೆನ್​ಡ್ರೈವ್​ ಹಂಚಿಕೆ ಕೇಸ್ ​: ನವೀನ್ ಗೌಡ,ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ​ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು ಹಾಸನದ‌ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್ ಆದೇಶಿಸಿದೆ.

ಹಾಸನ : ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ​ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು ಹಾಸನದ‌ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್ ಆದೇಶಿಸಿದೆ. ಇಂದು(ಜೂ.01) ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಹಾಜರುಪಡಿಸಿದ್ದರು.

ಇದೇ ಮೇ.30 ರಂದು ಪೆನ್​ಡ್ರೈವ್ ಹಂಚಿಕೆ ಪ್ರಕರಣದ ಇಬ್ಬರು ಆರೋಪಿಗಳಾದ ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಗೌಡ ಹಾಗೂ ಪ್ರೀತಂಗೌಡ  ಹಾಸನ ಜೈಲಿನಿಂದ ಬಿಡುಗಡೆ ಮಾಡಿ ವಾರಕ್ಕೆ ಒಮ್ಮೆ ತನಿಖಾಧಿಕಾರಿ ಎದುರು ಹಾಜರಾಗಬೇಕು ಎಂಬ ಷರತ್ತು ವಿಧಿಸಿ  ಸತ್ರ ನ್ಯಾಯಾಲಯ ಆದೇಶಿಸಿತ್ತು.

Ad
Ad
Nk Channel Final 21 09 2023
Ad