ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಹಂಚಿಕೆ ಪ್ರಕರಣದ ಇಬ್ಬರು ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದೆ.
ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್ಗೌಡರನ್ನು ಮೇ 12 ರಂದು ಎಸ್ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಹದಿನೆಂಟು ದಿನಗಳ ಬಳಿಕ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಚೇತನ್ ಹಾಗೂ ಲಿಖಿತ್ಗೌಡ ಇದ್ದು, ಇಂದು ಸಂಜೆ ಅಥವಾ ನಾಳೆ ಇಬ್ಬರೂ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

