Bengaluru 24°C
Ad

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ನವೀನ್ ಗೌಡ ಹಾಗೂ ಚೇತನ್‌ 3 ದಿನ ಎಸ್‌ಐಟಿ ಕಸ್ಟಡಿಗೆ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೊ ವೈರಲ್‌ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನವೀನ್ ಗೌಡ ಹಾಗೂ ಚೇತನ್‌ನನ್ನು ಮೂರು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೊ ವೈರಲ್‌ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನವೀನ್ ಗೌಡ ಹಾಗೂ ಚೇತನ್‌ನನ್ನು ಮೂರು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಜೂನ್ 1 ರಂದು ಶನಿವಾರ ಸಂಜೆ 4.30ಕ್ಕೆ ಆರೋಪಗಳನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸಲು ಸೂಚಿಸಲಾಗಿದೆ. ಇಂದಿನಿಂದ ಜೂನ್ 1 ರವರೆಗೆ ನವೀನ್ ಹಾಗೂ ಚೇತನ್ ಎಸ್ಐಟಿ ಕಸ್ಟಡಿಗೆ ನೀಡಿ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್, ನವೀನ್ ಗೌಡನನ್ನು ಎಸ್ಐಟಿ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದರು. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇದ್ದ ಕಾರಣ ಹೈಕೋರ್ಟ್‌ಗೆ ಬಂದಿದ್ದ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.

Ad
Ad
Nk Channel Final 21 09 2023
Ad