Bengaluru 24°C
Ad

ಅತ್ಯಾಚಾರ ಆರೋಪ ಪ್ರಕರಣ: ವಕೀಲ ದೇವರಾಜೇಗೌಡ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ವಕೀಲ ದೇವರಾಜೇಗೌಡ ವಿರುದ್ದದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಅವಧಿಯನ್ನ ವಿಸ್ತರಿಸಲು ಹಾಸನ2 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಹಾಸನ: ವಕೀಲ ದೇವರಾಜೇಗೌಡ ವಿರುದ್ದದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಅವಧಿಯನ್ನ ಮತ್ತೆ 14 ದಿನ ಅಂದರೆ ಜೂನ್ 7 ರವರೆಗೆ ವಿಸ್ತರಿಸಲು ಹಾಸನ2 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ದೇವರಾಜೇಗೌಡರ ನ್ಯಾಯಾಂಗ ಬಂಧನ ಇಂದಿಗೆ ಮುಗಿದಿದ್ದ ಹಿನ್ನೆಲೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಈ ವೇಳೆ ವಿಚಾರಣೆ ನಡೆಸಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಅತ್ಯಾಚಾರ ಆರೋಪ ಕೇಸ್​ನಲ್ಲಿ ವಕೀಲ ದೇವರಾಜೇಗೌಡರಿಗೆ ಮೇ.11 ರಂದು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಎಂಎಫ್​ಸಿ ಕೋರ್ಟ್​ ಆದೇಶಿಸಿತ್ತು.

Ad
Ad
Nk Channel Final 21 09 2023
Ad