Bengaluru 29°C
Ad

ಹಾಸನದಲ್ಲಿ ಭೀಕರ ರಸ್ತೆ ಅಪಘಾತ, ಮಗು ಸೇರಿದಂತೆ 6 ಜನ ಸಾವು

ಬೆಳ್ಳಂಬೆಳಗ್ಗೆ ಹಾಸನದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಮಗು ಸೇರಿ 6 ಜನ ಸಾವನಪ್ಪಿದ್ದಾರೆ. ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಘಟನೆ ನಡೆದಿದೆ.

ಹಾಸನ : ಬೆಳ್ಳಂಬೆಳಗ್ಗೆ ಹಾಸನದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಮಗು ಸೇರಿ 6 ಜನ ಸಾವನಪ್ಪಿದ್ದಾರೆ. ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಘಟನೆ ನಡೆದಿದೆ.ಕಾರು ಹಾಗೂ ಟ್ರಕ್ ನಡುವೆ ಭೀಕರ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತ ದುರ್ದೈವಿಗಳು.

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಮೂಲದ ಆರು ಜನ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad