Ad

ಸ್ಕೂಟರ್ ಗೆ ಬೊಲೆರೋ ಪಿಕಪ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಗೆ ಬೊಲೆರೋ ಡಿಕ್ಕಿ ಹೊಡೆದ ಪರಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಈ ಭೀಕರ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಹಾಸನ: ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಗೆ ಬೊಲೆರೋ ಡಿಕ್ಕಿ ಹೊಡೆದ ಪರಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಈ ಭೀಕರ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

Ad
300x250 2

ಅಪಘಾತದಲ್ಲಿ ಮೃತರಾದವರ ಗುರುತು ಪತ್ತೆಯಾಗಿಲ್ಲ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪಿಕಪ್, ರಸ್ತೆ ಬದಿಯ ರೈತರ ಜಮೀನಿಗೆ ನುಗ್ಗಿದೆ. ಸ್ಕೂಟರ್ ಸವಾರನೊಬ್ಬನ ಮೃತದೇಹ ಪಿಕಪ್ ಚಕ್ರಕ್ಕೆ ಸಿಲುಕಿ ನುಜ್ಜುಗುಜ್ಜಾಗಿದ್ದು ದಾರಿಹೋಕರು ವಾಹನವನ್ನು ತಳ್ಳಿ ಪಕ್ಕಕ್ಕೆ ಸರಿಸಿ ಶವ ಹೊರತೆಗೆದರು. ಶಾಂತಿಗ್ರಾಮ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Ad
Ad
Nk Channel Final 21 09 2023
Ad