ಹಾಸನ : ಕೆ.ಆರ್. ನಗರ ತಾಲ್ಲೂಕಿನ ಸಂತ್ರಸ್ತ ಮಹಿಳೆಯ ಅಪಹರಣ ಸಂಬಂಧಿಸಿದಂತೆ ಜೂನ್ 1 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್‌ಐಟಿ ತಂಡ, ಭವಾನಿ ರೇವಣ್ಣ ಅವರಿಗೆ ಮತ್ತೊಂದು ನೋಟಿಸ್ ಜಾರಿಗೆ ಮಾಡಿದೆ.
ʻಮೊದಲು ನೀಡಿದ್ದ ನೋಟಿಸ್ ಪ್ರತಿಕ್ರಿಯಿಸಿದ್ದ ತಾವು, ತನಿಖೆ ಅವಶ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡುವ ಅವಶ್ಯಕತೆ ಇದೆʼ ಎಂದು ನೋಟೀಸ್ ತಿಳಿಸಲಾಗಿದೆ.
ʻಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ಮನೆಯಲ್ಲಿ ಖುದ್ದು ಹಾಜರಿರಬೇಕುʼ ಎಂದು ಎಸ್‌ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೀಡಿರುವ ನೋಟೀಸ್‌ನಲ್ಲಿ ಸೂಚಿಸಿದ್ದಾರೆ.

