Bengaluru 21°C
Ad

ಮೆರವಣಿಗೆಯೊಂದಿಗೆ ಶ್ರೀ ಬಸವೇಶ್ವರ ಜಯಂತೋತ್ಸವ ಆಚರಣೆ

ನಗರದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ವಿಶೇಷ ಜಯಂತೋತ್ಸವವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಜರುಗಿತು.

ಹಾಸನ: ನಗರದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ವಿಶೇಷ ಜಯಂತೋತ್ಸವವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಜರುಗಿತು.

ನಗರದ ಅರಳೇಪೇಟೆ ರಸ್ತೆಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಬಸವೇಶ್ವರ ಜಯಂತೋತ್ಸವದ ಅಂಗವಾಗಿ ಶ್ರೀ ಜವೇನಹಳ್ಳಿ ಮಠದ ಶ್ರೀ ಸಂಗಮೇಶ್ವರ ಸ್ವಾಮೀಜಿ, ಸೀಗೆನಾಡು ಮಳೆಮಲ್ಲೇಶ್ವರ ಬೆಟ್ಟದ ಶ್ರೀ ನಂದೀಶ್ವರ ಶಿವಾಚಾರ್ಯ ಮಹಾಸ್ವಾಮೀಜಿ, ತಣ್ಣೀರುಹಳ್ಳ ಮಠದ ವಿಜಯಕುಮಾರ ಸ್ವಾಮೀಜಿ, ಯಸಳೂರು ತೆಂಕಲಗೂಡು ಬೃಹನ್ ಮಠದ ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಬೆಳ್ಳಿ ರಥದಲ್ಲಿ ಇಡಲಾಗಿದ್ದ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಸ್ವಾಮೀಜಿಗಳು ಹಾಗೂ ಸಮಾಜದ ಮುಖಂಡರು ಪುಷ್ಪಾರ್ಚನೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿ ಮೆರಗು ನೀಡಿತು. ಮೆರವಣಿಗೆ ನಂತರ ಶ್ರೀ ಬಸವೇಶ್ವರವರ ದೇವಸ್ಥಾನದ ಆವರಣದಲ್ಲಿ ಭಕ್ತಾಧಿಗಳಿಗೆ ಅನ್ನದಾಸೋಹ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಅಖಿಲ ವೀರಶೈಚ ಲಿಂಗಾಯಿತ ಸಮಾಜದ ಜಿಲ್ಲಾಧ್ಯಕ್ಷ ಬಿ.ಆರ್. ಗುರುದೇವ್, ವೀರಶೈವ ಲಿಂಗಾಯಿತ ಸಂಘದ ನಿರ್ದೇಶಕ ಶೋಭನ್ ಬಾಬು ಸಂಗಂ, ಹೇಮೇಶ್, ಸಂಘದ ಉಪಾಧ್ಯಕ್ಷ ಕಿರಣ್ ಕುಮಾರ್, ಮಾಜಿ ನಿರ್ದೇಶಕ ಲೋಕೇಶ್, ಮುಖಂಡರಾದ ಹೇ ಮಂತ್, ರೋಹಿತ್, ವಸಂತ ಕುಮಾರ್, ಹೆಚ್.ಎನ್. ನಾಗೇಶ್, ಕೀರ್ತಿಕುಮಾರ್, ಯು.ಎಸ್. ಬಸವರಾಜು, ದೊಡ್ಡೇಗೌಡ, ಜಿ.ಓ. ಮಹಂತಪ್ಪ, ಸೇರಿದಂತೆ ಇತರರು ಹಾಜರಿದ್ದರು.

Ad
Ad
Nk Channel Final 21 09 2023
Ad