Bengaluru 22°C
Ad

ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ : ದೂರು ಸಲ್ಲಿಸಿದ ವ್ಯಕ್ತಿ ವಿರುದ್ಧ ಎಫ್‌ಐಆರ್!

ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದ್ರೆ, ಇತ್ತ ಆರೋಪ ಮಾಡಿರುವ ಜೆಡಿಎಸ್​ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ.

ಹಾಸನ: ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದ್ರೆ, ಇತ್ತ ಆರೋಪ ಮಾಡಿರುವ ಜೆಡಿಎಸ್​ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ.

ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿದೆ.

Ad
Ad
Nk Channel Final 21 09 2023
Ad