Bengaluru 22°C
Ad

ಹೊಳೆನರಸೀಪುರದ ಪ್ರಜ್ವಲ್ ನಿವಾಸದಲ್ಲಿ ಮಹಜರು ನಡೆಸಿದ ಎಸ್‍ಐಟಿ ಅಧಿಕಾರಿಗಳು

ಅತ್ಯಾಚಾರ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್‍ಐಟಿ ಅಧಿಕಾರಿಗಳು ಅವರ ಹೊಳೆನರಸೀಪುರಕ್ಕೆ ಕರೆತಂದಿದ್ದಾರೆ.

ಹಾಸನ: ಅತ್ಯಾಚಾರ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್‍ಐಟಿ ಅಧಿಕಾರಿಗಳು ಅವರ ಹೊಳೆನರಸೀಪುರಕ್ಕೆ ಕರೆತಂದಿದ್ದಾರೆ.

ಈ ಮೂಲಕ 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ಪ್ರಜ್ವಲ್ ಆಗಮನವಾಗಿದೆ. ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಕರೆತಂದ ಎಸ್‍ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.

ಡಿವೈಎಸ್‍ಪಿ ಸತ್ಯನಾರಾಯಣ ನೇತೃತ್ವದಲ್ಲಿ ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಮಾಧ್ಯಮಗಳ ಕ್ಯಾಮೆರಾಗಳಿಗೆ ಕಾಣದಂತೆ ಅವರ ನಿವಾಸಕ್ಕೆ ಕರೆದೊಯ್ಯಲಾಯಿತು.

ಚೆನ್ನಾಂಬಿಕಾ ನಿವಾಸದ ಎದುರು ಎಎಸ್‍ಪಿ ವೆಂಕಟೇಶ್ ನಾಯ್ಡು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಸ್‍ಐಟಿ ಅಧಿಕಾರಿಗಳೊಂದಿಗೆ ಎಫ್‍ಎಸ್‍ಎಲ್ ಅಧಿಕಾರಿಗಳು ಸಹ ಮಾಹಿತಿ ಕಲೆಹಾಕುತ್ತಿದ್ದಾರೆ.

Ad
Ad
Nk Channel Final 21 09 2023
Ad