Bengaluru 27°C

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು!

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದೆ.

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದೆ.


ಯಶ್ವಂತ್‌ ಸಿಂಗ್ ಅಲಿಯಾಸ್ ಗಣೇಶ್ (29), ರೋಹಿತ್ (28) ಮೃತ ಯುವಕರು. ಮೃತ ಗಣೇಶ್ ಮತ್ತು ರೋಹಿತ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಭಾನುವಾರ ಕೆಲಸ ಮುಗಿಸಿ ಇಬ್ಬರು ಸಂಜೆ ಕೆರೆಗೆ ಈಜಲು ತೆರಳಿದ್ದರು. ಇಬ್ಬರಿಗೂ ಈಜು ಗೊತ್ತಿದ್ದರಿಂದ ಮೊದಲು ರೋಹಿತ್ ಕೆರೆಗೆ ಧುಮುಕಿದ್ದಾನೆ. ಈ ವೇಳೆ ಕೆರೆಯಲ್ಲಿ ಬೆಳೆದಿದ್ದ ಬಳ್ಳಿಗಳು ರೋಹಿತ್ ಕಾಲಿಗೆ ಸುತ್ತಿಕೊಂಡಿದೆ.


ರೋಹಿತ್ ಕೆರೆಯಿಂದ ಮೇಲೆ ಬರಲಾರದೇ ಕಾಪಾಡಿ ಎಂದು ಕಿರುಚಿದ್ದಾನೆ. ಈ ವೇಳೆ ಗೆಳೆಯನನ್ನು ರಕ್ಷಿಸಲು ಯಶ್ವಂತ್‌ ಸಿಂಗ್ ಕೆರೆಗೆ ಜಿಗಿದ್ದಾನೆ. ಬಳ್ಳಿ, ಗಿಡಗಂಟಿಗಳ ನಡುವೆ ಸಿಲುಕಿಕೊಂಡ ಯಶ್ವಂತ್‌ ಸಿಂಗ್ ಮತ್ತು ರೋಹಿತ್ ಕೆರೆಯಿಂದ ಮೇಲೆ ಬರಲಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.


ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ತಡರಾತ್ರಿ ಶೋಧಕಾರ್ಯ ನಡೆಸಿ ಯುವಕರಿಬ್ಬರ ಶವಗಳನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Nk Channel Final 21 09 2023