Bengaluru 22°C
Ad

ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್: ತಪ್ಪಿದ ಅನಾಹುತ

ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್ ಆಗಿರುವ ಘಟನೆ ಹಾವೇರಿಯ ತೋಟದಯಲ್ಲಾಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ನಡೆದಿದೆ

ಹಾವೇರಿ: ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್ ಆಗಿರುವ ಘಟನೆ ಹಾವೇರಿಯ ತೋಟದಯಲ್ಲಾಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ನಡೆದಿದೆ.

Ad
300x250 2

ಘಟನೆಯ ವೇಳೆ ಲಾರಿಯ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ದೊಡ್ಡ ದುರಂತವೊಂದು ತಪ್ಪಿದೆ.

ಸ್ಪಿರಿಟ್ ತುಂಬಿದ ಲಾರಿ ಬೆಳಗಾವಿಯಿಂದ ಬೆಂಗಳೂರು ಕಡೆ ಹೊರಟ್ಟಿತ್ತು. ಲಾರಿಯಲ್ಲಿ ಸುಮಾರು 24 ಲಕ್ಷ ರೂ. ಮೌಲ್ಯದ ವೈಟ್ ಸ್ಪಿರಿಟ್ ತುಂಬಿತ್ತು. ಲಾರಿಯ ಟೈಯರ್ ಹೀಟ್‌ ಆಗಿದ್ದರಿಂದ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸಮಯಪ್ರಜ್ಞೆಯಿಂದ ಮುಂದಾಗುವ ದುರಂತ ತಪ್ಪಿಸಿದ್ದಾರೆ.

ಹೆದ್ದಾರಿಯಲ್ಲಿ ಸ್ವಲ್ಪ ದೂರದಲ್ಲೇ ಎಲ್ಲಾ ವಾಹನಗಳನ್ನು ನಿಲ್ಲಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಪೊಲೀಸರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಪ್ರಕರಣ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Ad
Ad
Nk Channel Final 21 09 2023
Ad