Ad

ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ: 13 ಜನ ಮೃತ್ಯು

ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಜನ ಸಾವನ್ನಪ್ಪಿರುವ ಘಟನೆ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ನಲ್ಲಿ ನಡೆದಿದೆ.

ಹಾವೇರಿ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಜನ ಸಾವನ್ನಪ್ಪಿರುವ ಘಟನೆ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ನಲ್ಲಿ ನಡೆದಿದೆ.

Ad
300x250 2

ಬೆಳಗಾವಿ ಸವದತ್ತಿ ಯಲ್ಲಮ್ಮನ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಅನಾಹುತ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸವದತ್ತಿ ಯಲ್ಲಮ್ಮನ ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಮೃತರೆಲ್ಲ ಶಿವಮೊಗ್ಗ ಮೂಲದ ನಿವಾಸಿಗಳು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad
Ad
Nk Channel Final 21 09 2023
Ad