ಹಾವೇರಿ: ದೀಪಾವಳಿ ಹಬ್ಬದ ಸಂದರ್ಭ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅನಾಹುತ ಸಂಭವಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹೋರಿ ತಿವಿದು ವೃದ್ಧರೊಬ್ಬರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿಯ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವದಲ್ಲಿ ಈ ದುರ್ಘಟನೆ ನಡೆದಿದೆ. ಪ್ರತಿ ವರ್ಷದಂತೆ ಬಲಿಪಾಡ್ಯಮಿಯಂದು ಹೋರಿ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಕೊಬ್ಬರಿ ಹೋರಿ ತಿವಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು 70 ವರ್ಷದ ಚಂದ್ರಶೇಖರ್​​​ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ್ ಹಾವೇರಿಯ ದಾನೇಶ್ವರಿನಗರದ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ಗೆ ರವಾನಿಸಲಾಗಿದೆ.