ಹಾವೇರಿ: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬಿ.ಸಿ ಪಾಟೀಲ್ ಪುತ್ರಿ ಸೌಮ್ಯ ಅವರ ಪತಿಯಾಗಿರುವ ಪ್ರತಾಪ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

