ಹಾವೇರಿ: ತಡರಾತ್ರಿ ಮನೆಯಲ್ಲಿದ್ದ ಫ್ರಿಡ್ಜ್ ಬ್ಲಾಸ್ಟ್ ಆಗಿ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿಯ ಮಂಜುನಾಥ ನಗರದ ಎ ಬ್ಲಾಕ್ನಲ್ಲಿ ನಡೆದಿದೆ.
ಚನ್ನಬಸಪ್ಪ ಗೂಳಪ್ಪನವರ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಮನೆಯಲ್ಲಿದ್ದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

