ಹಾವೇರಿ: ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ದಸರಾ ಹಬ್ಬದ ಪ್ರಯುಕ್ತ ನಡೆಯುವ ಕಾರ್ಣಿಕೋತ್ಸವದಲ್ಲಿ ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದಾನೆ.
ಪ್ರತಿ ವರ್ಷ ನವರಾತ್ರಿ ವೇಳೆ ಭವಿಷ್ಯವಾಣಿ ನುಡಿಯುವ ಗೊರವಯ್ಯ 9 ದಿನ ಉಪವಾಸ ವಿದ್ದು ಸಾವಿರಾರು ಭಕ್ತರ ಸಮ್ಮುಖದಲ್ಲಿ 18 ಅಡಿ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ,
ಕಾರ್ಣಿಕ ನುಡಿ ಕುರಿತು ದೇವರಗುಡ್ಡದಲ್ಲಿ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ ಹೇಳಿಕೆ ನೀಡಿದ್ದು.. ಆಕಾಶದತ್ತ ಚಿಗುರಿತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್… ಆಕಾಶದತ್ತ ಚಿಗುರಿತಲೇ ಅಂದರೆ ಒಳ್ಳೆ ಮಳೆ ಆಗುತ್ತೆ, ಬೇರೆಲ್ಲಾ ಮುತ್ತಾಯಿತಲೇ ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ, ಅದನ್ನ ತೆಗೆದುಕೊಳ್ಳೋ ಫಲಾನುಭವಿಗಳಿಗೂ ಒಳ್ಳೆದಾಗುತ್ತೆ ಎಂದರ್ಥ.