Bengaluru 23°C
Ad

ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಮೃತ್ಯು

ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್‌ ಬಳಿ ನಡೆದಿದೆ.

ಹಾವೇರಿ: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್‌ ಬಳಿ ನಡೆದಿದೆ.

ಸಿದ್ದು(24) ಹಾಗೂ ಪ್ರೀತಮ್‌(25) ಮೃತ ಕೂಲಿ ಕಾರ್ಮಿಕರು. ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದ್ದಾಗ ರೋಲರ್ ಹರಿದು ಸಾವನ್ನಪ್ಪಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲೇ ಶವವಿಟ್ಟು ಕುಟುಂಬಸ್ಥರು, ಜನರಿಂದ ಪ್ರತಿಭಟನೆ ಮಾಡಲಾಗಿದೆ. ಸ್ಥಳಕ್ಕೆ ಗುತ್ತಿಗೆದಾರರು ಬರುವವರೆಗೂ ಶವ ಸ್ಥಳಾಂತರಿಸದಿರಲು ನಿರ್ಧಾರ ಮಾಡಲಾಗಿದೆ. ಸ್ಥಳದಲ್ಲಿಯೇ ಪರಿಹಾರ ಘೋಷಣೆ ಮಾಡಲು ಒತ್ತಾಯಿಸಲಾಗಿದೆ. ಸದ್ಯ ಬಿಗುವಿನ ವಾತಾವರಣ ಹಿನ್ನೆಲೆ ಸ್ಥಳಕ್ಕೆ ಎಸ್​ಪಿ ಭೇಟಿ ನೀಡಿದ್ದಾರೆ.

Ad
Ad
Nk Channel Final 21 09 2023