ಕಾರವಾರ: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನ್ನಾಥ ಪುತ್ರಿ ಕೃತಿಕಾ ಅವರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು.

ಇದೀಗ, ಹೆಚ್​ಡಿ ಕುಮಾರಸ್ವಾಮಿ ಅವರು ಜಗನ್ನಾಥ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್​ಇಎಲ್​ನಲ್ಲಿ ಉದ್ಯೋಗ ಕೊಡಿಸಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ ದೂರವಾಣಿ ಕರೆ ಮಾಡಿ ಉದ್ಯೋಗ ಖಾತರಿಪಡಿಸಿದ್ದಾರೆ. ಜಗನ್ನಾಥ ಅವರ ಇನ್ನೋರ್ವ ಪುತ್ರಿ ಪಲ್ಲವಿ ನಾಯ್ಕ ಅವರಿಗೆ ಕಳೆದವಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ರಾಜ್ಯ ಸರ್ಕಾರ ನೌಕರಿ ನೀಡಿತ್ತು.